1೦೦ ದಿನ ಪೂರೈಸಿದ ಕಾವೇರಿ ಹೋರಾಟ!!
ತಮಿಳ್ ನಾಡಿಗೆ ಕಾವೇರಿ ನೀರು ಹರಿಸುವಂತೆ ನಿರಂತರವಾಗಿ ವೈಜ್ಞಾನಿಕ ಆದೇಶ ನೀಡುತ್ತಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಗರದಲ್ಲಿ ನಡೆಸುತ್ತಿರುವ ನಿರ್ದಿಷ್ಟಾವಧಿ ಧರಣಿ ಬುಧವಾರ ನೂರು ದಿನ ಪೂರೈಸಿತು.
ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯ ಸರ್ಕಾರದ ನಿರ್ಲಕ್ಷದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ನಡುವೆ ಜಲವಿವಾದ ಉಂಟಾದಾಗ ಎರಡು ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಂದಾಗದ ಪ್ರಧಾನಿ ನರೇಂದ್ರ ಮೋದಿ ಸಂಕಷ್ಟ ಸನ್ನಿವೇಶದಲ್ಲೂ ಹಠಮಾರಿತನ ತೋರಿಸುತ್ತಿದ್ದಾರೆ. ಜೊತೆಗೆ ರಾಷ್ಟ್ರೀಯ ಜಲನೀತಿ ರೂಪಿಸದೆ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ