7.5 ಸಾವಿರ ಶಿಕ್ಷಕರ ಬರ್ತಿಗೆ ಪ್ರಸ್ತಾವನೆ!!
ಎಲ್ಲರಿಗೂ ನಮಸ್ಕಾರ,
ಸರ್ಕಾರಿ ಶಾಲೆಗಳಿಗೆ ಅಗತ್ಯವಾದಷ್ಟು ಶಿಕ್ಷಕರನ್ನು ಭರ್ತಿ ಮಾಡುವುದು ಸರ್ಕಾರಕ್ಕೆ ಸವಾಲಿನ ಕೆಲಸವಾಗುತ್ತಿರುವ ಬೆನ್ನಲ್ಲೇ ಈ ಶೈಕ್ಷಣಿಕ ವರ್ಷದಲ್ಲಿ 4985 ಶಿಕ್ಷಕರು ನಿವೃತ್ತರಾಗಿದ್ದಾರೆ. ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆಸಕ್ತಿ ತೋರಿಸಿದೆ. ಈ ಇಂದಿನ ಸರ್ಕಾರದ ಅವಧಿಯಲ್ಲಿ 2022 ರಿಂದ 23 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾಲಿ ಇದ್ದ ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿ ಸೂಚನೆ ಹೊರಡಿಸಲಾಗಿತ್ತು. ಆ ಪೈಕಿ 13352 ಅರ್ಹ ಅಭ್ಯರ್ಥಿಗಳು ಆಯ್ಕೆಯಾಗಿದ್ದು ನ್ಯಾಯಾಲಯದ ಪ್ರಕರಣಗಳನ್ನು ಹೊರತುಪಡಿಸಿ ಒಟ್ಟು 12415 ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಅಷ್ಟರ ನಡುವೆಯೇ ಮುಂದಿನ ಶೈಕ್ಷಣಿಕ ಅವಧಿಗೆ ಹೊಸದಾಗಿ 5,000 ಶಿಕ್ಷಕರ ಕೊರತೆ ಎದುರಾಗಲಿದೆ. 2023 ನೇ ಸಾಲಿನಲ್ಲಿ ನಿವೃತ್ತಿಯಿಂದ ತೆರವಾಗುವ 4985 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಕೋರಿರುವ ಪ್ರಸ್ತಾವನೆಯೂ ಆರ್ಥಿಕ ಇಲಾಖೆ ಪರಿಶೀಲನೆ ಎಲ್ಲಿದೆ.
ಪ್ರಸ್ತುತ ಸನ್ನಿವೇಶದಲ್ಲಿ ಆಂಗ್ಲ ಭಾಷೆ ಹಾಗೂ ವಿಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬೇಕಾಗಿದೆ. ಆದರೆ ನಿರೀಕ್ಷೆ ಎಷ್ಟು ಶಿಕ್ಷಕರ ಲಭ್ಯತೆ ಇಲ್ಲವಾಗಿದೆ. ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ 2127 ಆಂಗ್ಲ , 6934 ವಿಜ್ಞಾನ ಶಿಕ್ಷಕರ ಕೊರತೆ ಇದೆ.
ಇದಲ್ಲದೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು ಎರಡುವರೆ ಸಾವಿರ ಶಿಕ್ಷಕರ ಹುದ್ದೆಗಳನ್ನು ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೆ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗಳ ಪಟ್ಟು ನೇರ ನೇಮಕ ಮೂಲಕ ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ ಈ 15 ಸಾವಿರ ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಕಾರಣ ಪ್ರಸತ್ ಸಾಲಿನಲ್ಲಿ ಒಟ್ಟು ಎರಡು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆದಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಗುಣಮಟ್ಟಕ್ಕೆ ಪೆಟ್ಟು
ಕಾಲಕಾಲಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳದ ಪರಿಣಾಮ ಸರ್ಕಾರಿ ಶಾಲೆಯ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿರುವುದನ್ನು ಅಧಿಕಾರಿಗಳು ಒಪ್ಪಿಕೊಳ್ಳುತ್ತಾರೆ. ರಾಜ್ಯದಲ್ಲಿ 41913 ಪ್ರಾಥಮಿಕ ಶಾಲೆಗಳಿದ್ದು, 4844 ಪ್ರೌಢಶಾಲೆಗಳಿವೆ. ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾದ ಹುದ್ದೆ 1,88531 ಇದ್ದು ಕಾರ್ಯನಿರತರ ಬಲ 148501. ಅಂದರೆ ಖಾಲಿ ಹುದ್ದೆ 40000 ಇದೆ. ಪ್ರೌಢ ಶಾಲೆಗಳಲ್ಲಿ ಮಂಜೂರಾದ ಹುದ್ದೆ 44,341 ಇದ್ದು ಕಾರ್ಯನಿರತ 34,186. ಅಂದರೆ 10,000 ಖಾಲಿ ಹುದ್ದೆ. ಒಟ್ಟಾರೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆ 2,32,872 ಆದರೆ ಕಾರ್ಯನಿರತವಾಗಿರುವವರು 1,82687. ಖಾಲಿ ಹುದ್ದೆ ಬರೋಬ್ಬರಿ ಐವತ್ತು ಸಾವಿರವನ್ನು ಮೀರಿದೆ.
ಆದ್ಯತೆ ಮೇಲೆ ನೇಮಕ
ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಹುದ್ದೆ ಬರ್ತಿಗೆ ನಿಯಂತ್ರಣ ಹಾಕಲಾಗಿತ್ತು. ಬಳಿಕ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ಆದ್ಯತೆ ಮೇಲೆ ನೇಮಕಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಶಿಕ್ಷಕರ ನೇಮಕ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ. ಶಿಕ್ಷಕರ ಅನಿವಾರ್ಯತೆಯ ಹರಿದಿದೆ. ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಿ ಅವಕಾಶ ಮಾಡಿಕೊಡಲಾಗುತ್ತದೆ. ಹೊಸ ವರ್ಷ ಅಥವಾ ಬಜೆಟ್ ಸಂದರ್ಭದಲ್ಲಿ ಶುಭ ಶುದ್ದಿ ನಿರೀಕ್ಷಿಸಬಹುದು ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅತಿಥಿ ಶಿಕ್ಷಕರೇ ಗತಿ
ಶಿಕ್ಷಕರ ನೇಮಕ ವಿವಿಧ ಕಾರಣಗಳಿಂದ ಅಷ್ಟೊಂದು ಸಲ್ಲಿಸಲ್ಲದ ಪ್ರಕ್ರಿಯೆ. ಹೀಗಾಗಿ ಕಾಲಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವವರೆಗು ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ಬಳಕೆ ಮಾಡಿಕೊಳ್ಳುವ ಪರಂಪರೆ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಹುದ್ದೆಗಳಿಗೆ ಎದುರಾಗಿ ಒಟ್ಟು 35192 ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಲ್ಲಿ ಕೊರತೆ ಇರುವ ಹುದ್ದೆಗಳಿಗೆ ಪ್ರಸ್ತುತ ಸಾಲಿನಲ್ಲಿ 800 ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಕರ ಕೊರತೆ ನೀಗಿಸಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.
ಧನ್ಯವಾದಗಳು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ