ಕನ್ನಡ ಶಾಲೆಗಳ ಉಳಿವಿಗೆ ನ್ಯಾಯಾಂಗ ಹೋರಾಟ;
ಎಲ್ಲರಿಗೂ ನಮಸ್ಕಾರ,
ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯು ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಮಾರಕವಾಗಿದ್ದು ಇದಕ್ಕೆ ಪರಿಹಾರ ಪಡೆಯಲು ನ್ಯಾಯಾಂಗದ ಮೊರೆ ಹೋಗಬೇಕಿದೆ. ಜೊತೆಗೆ ಕನ್ನಡ ಭಾಷೆಯ ಬೆಳವಣಿಗೆಗಾಗಿ ಜನಂದೋಲನ ರೂಪಿಸುವ ಅಗತ್ಯವಿದೆ ಎಂದು ವಿವಿಧ ಕ್ಷೇತ್ರಗಳ ಪ್ರಮುಖರು ಅಭಿಪ್ರಾಯ ವ್ಯಕ್ತಪಡಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ ಬುಧವಾರ ಹಮ್ಮಿಕೊಂಡಿದ್ದ 'ಕನ್ನಡ ಶಾಲೆ ಉಳಿಸಿ ಕನ್ನಡ ಬೆಳೆಸಿ' ಚಿಂತನ ಸಭೆಯಲ್ಲಿ ಸಾಹಿತ್ಯ, ಶಿಕ್ಷಣ, ನ್ಯಾಯಾಂಗ, ಆಡಳಿತ ಸೇರಿ ವಿವಿಧ ಕ್ಷೇತ್ರಗಳ ಹಾಗೂ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು. ಈ ವೇಳೆ ಜಿಲ್ಲೆ ಬಂದು ಮಾದರಿ ಕನ್ನಡ ಶಾಲೆ ಸ್ಥಾಪನೆ, ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ, ಶಿಕ್ಷಕರಿಗೆ ಉತ್ತಮ ತರಬೇತಿ, ಕನ್ನಡ ದೊಂದಿಗೆ ಇಂಗ್ಲಿಷ್ ಬೋಧನೆ, ಬಜೆಟ್ ನಲ್ಲಿ ಶಿಕ್ಷಣಕ್ಕಾಗಿ ಪ್ರತ್ಯೇಕ ಅನುದಾನ ಘೋಷಣೆ ಸೇರಿ ಹಲವು ಸಲಹೆಗಳನ್ನು ನೀಡಿದರು. ಅಗತ್ಯಕ್ಕೆ ತಕ್ಕ ಶಿಕ್ಷಕರ ನೇಮಕ ಮಾಡಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಹಾಗೂ ಈ ವಿಚಾರವಾಗಿ ಸೂಕ್ತ ನಿರ್ಣಯ ಕೈಗೊಳ್ಳಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಲಾಯಿತು.
ಧನ್ಯವಾದಗಳು,
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ